alex Certify ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಅಪಾರ್ಟ್ ಮೆಂಟ್ ನಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಅಪಾರ್ಟ್ ಮೆಂಟ್ ನಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾಲರ್ಸ್ ಕಾಲೋನಿಯ ಅಪಾರ್ಟ್ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಆಟೋ ಚಾಲಕ ಚಂದ್ರಶೇಖರ, ಉಣಕಲ್ ಸಾಯಿನಗರದ ಅನಸೂಯಾ ಮತ್ತು ಇಬ್ಬರು ಯುವಕರನ್ನು ಬಂಧಿಸಲಾಗಿದೆ.

ಅಪಾರ್ಟ್ಮೆಂಟ್ ಒಂದರಲ್ಲಿ ಮನೆ ಬಾಡಿಗೆಗೆ ಪಡೆದುಕೊಂಡಿದ್ದ ಆರೋಪಿಗಳು, ಕೆಲಸ ಕೊಡಿಸುವುದಾಗಿ ನಂಬಿಸಿ ಭದ್ರಾವತಿ ಮತ್ತು ನಗರದ ಇಬ್ಬರು ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಗೋಕುಲ ರೋಡ್ ಠಾಣೆ ಹಾಗೂ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...