alex Certify ರಸ್ತೆಯಲ್ಲಿದ್ದ ಕಾಂಡೊಮ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…? ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲಿದ್ದ ಕಾಂಡೊಮ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…? ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಅರೆಸ್ಟ್

ತುಮಕೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿ 4 ರ ಕ್ಯಾತ್ಸಂದ್ರ ಸೇತುವೆ ಸಮೀಪ ಕೆಲವು ದಿನಗಳ ಹಿಂದೆ ರಸ್ತೆಯಲ್ಲಿ ಕಾಂಡೋಮ್ ಗಳನ್ನು ರಸ್ತೆಯುದ್ದಕ್ಕೂ ಚೆಲ್ಲಾಡಿರುವುದು ಕಂಡುಬಂದಿತ್ತು.

ಈ ಮಾಹಿತಿ ವಿವರ ಕಲೆ ಹಾಕಿದ ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿದೆ. ತನಿಖೆ ಮುಂದುವರೆಸಿದ ಪೊಲೀಸರು ಕ್ಯಾತ್ಸಂದ್ರದ ಲಾಡ್ಜ್ ಮೇಲೆ ದಾಳಿ ಮಾಡಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಪುರುಷರನ್ನು ಬಂಧಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಮಹಿಳೆಯೊಬ್ಬರು ಪರಾರಿಯಾಗಿದ್ದಾರೆ. ಸುರಂಗ ಕೊರೆದು ಮಹಿಳೆಯರನ್ನು ಬಚ್ಚಿಡಲಾಗಿತ್ತು. ಪೊಲೀಸರ ದಾಳಿ ವೇಳೆ ಸೂಚನೆ ನೀಡಿ ಸುರಂಗದೊಳಗೆ ಮಹಿಳೆಯರು, ಪುರುಷರನ್ನು ಬಚ್ಚಿಡಲಾಗುತ್ತಿತ್ತು. ಈ ರಹಸ್ಯ ಸುರಂಗ ಯಾರಿಗೂ ಗೊತ್ತಾಗುತ್ತಿರಲಿಲ್ಲ. ಈ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...