ಆಧಾರ್ ಕಾರ್ಡ್‌ನ ವಿಶೇಷತೆಯೆಂದರೆ ಅದು ನಮ್ಮ ಫಿಂಗರ್‌ಪ್ರಿಂಟ್, ಕಣ್ಣಿನ ಸ್ಕ್ಯಾನ್ ಮತ್ತು ಮುಖ ಗುರುತಿಸುವಿಕೆಯಂತಹ ಮಾಹಿತಿಯನ್ನು ಒಳಗೊಂಡಿರುತ್ತದೆ. ಈ ಮಾಹಿತಿ ವಂಚಕರ ಕೈಸೇರಿದರೆ ಅದನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಇತ್ತೀಚೆಗೆ ಆಧಾರ್ ಸಂಖ್ಯೆಗಳಂತಹ ವೈಯಕ್ತಿಕ ಮಾಹಿತಿಯನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ ಆಧಾರ್ ಬಯೋಮೆಟ್ರಿಕ್ ಮಾಹಿತಿಯನ್ನು ಸುರಕ್ಷಿತವಾಗಿರಿಸುವುದು ಮುಖ್ಯ. ಇದನ್ನು ಸೇಫ್ ಆಗಿ ಲಾಕ್ ಮಾಡುವುದು ಹೇಗೆ ಅನ್ನೋದನ್ನು ನೋಡೋಣ.
UIDAI ಮೂಲಕ ನೀಡಲಾಗುವ ಆಧಾರ್ ಕಾರ್ಡ್‌ನಲ್ಲಿರುವ ಬಯೋಮೆಟ್ರಿಕ್ ಮಾಹಿತಿಯನ್ನು ನಮಗೆ ಬೇಕಾದಷ್ಟು ಸಮಯದವರೆಗೆ ಲಾಕ್ ಮಾಡಬಹುದು. ಅದನ್ನು ಮತ್ತೆ ಅನ್‌ಲಾಕ್ ಮಾಡುವವರೆಗೆ ಯಾರೂ ಅದನ್ನು ಬಳಸಲು ಸಾಧ್ಯವಾಗುವುದಿಲ್ಲ.
ಆಧಾರ್ ಲಾಕ್ ಮಾಡಲು UIDAI ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ನಿಮ್ಮ ಮೊಬೈಲ್ ಫೋನ್‌ನಲ್ಲಿ mAadhaar ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ.
ನಿಮ್ಮ ಆಧಾರ್ ಸಂಖ್ಯೆ ಮತ್ತು OTP ಅನ್ನು ನಮೂದಿಸುವ ಮೂಲಕ ಲಾಗ್ ಇನ್ ಮಾಡಿ. ಅಲ್ಲಿ “ಮೈ ಆಧಾರ್” ವಿಭಾಗದಲ್ಲಿ, “ಲಾಕ್/ಅನ್ಲಾಕ್ ಬಯೋಮೆಟ್ರಿಕ್ಸ್” ಆಯ್ಕೆಯನ್ನು ಹುಡುಕಿ.
ನಿಮ್ಮ ಗುರುತನ್ನು ಪರಿಶೀಲಿಸಲು ಆಧಾರ್ ಸಂಖ್ಯೆ ಮತ್ತು OTP ಅನ್ನು ಮರು-ನಮೂದಿಸಿ. ಆಧಾರ್ ಬಯೋಮೆಟ್ರಿಕ್ ಮಾಹಿತಿಯನ್ನು ಸುರಕ್ಷಿತವಾಗಿರಿಸಲು “ಲಾಕ್ ಬಯೋಮೆಟ್ರಿಕ್ಸ್” ಎಂಬುದನ್ನು ಆಯ್ಕೆ ಮಾಡಿಕೊಳ್ಳಿ.
ಪ್ರಕ್ರಿಯೆಯು ಪೂರ್ಣಗೊಂಡ ನಂತರ ನಿಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಲಾಕ್ ಮಾಡಲಾಗಿದೆ ಎಂದು ನಿಮಗೆ ತಿಳಿಸುವ ದೃಢೀಕರಣ ಸಂದೇಶ ಬರುತ್ತದೆ. ನಿಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಅನ್‌ಲಾಕ್ ಮಾಡಲು ಬಯಸಿದರೆ ಅದೇ ಪ್ರಕ್ರಿಯೆಯನ್ನು ಪುನರಾವರ್ತಿಸಬಹುದು ಮತ್ತು “ಅನ್‌ಲಾಕ್ ಬಯೋಮೆಟ್ರಿಕ್ಸ್” ಆಯ್ಕೆಯನ್ನು ಆರಿಸಿಕೊಳ್ಳಬೇಕು.