alex Certify BIG NEWS : ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಪ್ರತಿಭಟನೆ : ವಿಧಾನಸಭೆಯ ಪ್ರವೇಶ ದ್ವಾರದ ಗಾಜು ಪುಡಿ ಪುಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಪ್ರತಿಭಟನೆ : ವಿಧಾನಸಭೆಯ ಪ್ರವೇಶ ದ್ವಾರದ ಗಾಜು ಪುಡಿ ಪುಡಿ

ಬೆಂಗಳೂರು : 10 ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ವಿಧಾನಸಭೆಯ ಪೂರ್ವ ಭಾಗದ ಪ್ರವೇಶ ದ್ವಾರದ ಗಾಜು ಪುಡಿ ಪುಡಿಯಾಗಿದೆ.

ವಿಧಾನಸಭೆಯಿಂದ ಅಮಾನತುಗೊಂಡವರನ್ನು ಮಾರ್ಷಲ್ಸ್ ಹೊರಹಾಕಿದರು. ಇನ್ನೊಂದು ಕಡೆ ಸದನದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಗಲಾಟೆಯಲ್ಲಿ ವಿಧಾನಸಭೆಯ ಪೂರ್ವ ಭಾಗದ ಪ್ರವೇಶ ದ್ವಾರದ ಗಾಜು ಪುಡಿ ಪುಡಿಯಾಗಿದೆ,

ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನದ ಮೇಲೆ ಬಿಜೆಪಿ ಸದಸ್ಯರು ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸಿದ್ದು, ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ನಂತರ ಕೂಡಲೇ ಆಂಬುಲೆನ್ಸ್ ಬರಲು ಹೇಳಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಹಳ ಸುಸ್ತಾಗಿ ಲೋ ಬಿಪಿ ಆದ ಕಾರಣ ಅವರು ಅಸ್ವಸ್ಥಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿಯ ಹತ್ತು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಅಮಾನತು ಆದೇಶ ಹೊರಡಿಸುತ್ತಿದ್ದಂತೆ, ಸಸ್ಪೆಂಡ್ ಆದ ಬಿಜೆಪಿ ಸದಸ್ಯರನ್ನು ಸದನದಿಂದ ಹೊರ ಹಾಕಲು ಮಾರ್ಷಲ್ ಗಳು ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಅಮಾನತುಗೊಂಡಿರುವ ಶಾಸಕರನ್ನು ಬಲವಂತವಾಗಿ ಹೊರಹಾಕದಂತೆ ಬಿಜೆಪಿಯ ಉಳಿದ ಸದಸ್ಯರು ತಡೆಗೋಡೆಯಾಗಿ ನಿಂತು ತಡೆಯಲು ಯತ್ನಿಸಿದ ಘಟನೆ ನಡೆದಿದೆ. ಆದರೂ ಕೂಡ ಮಾರ್ಷಲ್ ಗಳು ಅಮಾನತುಗೊಂಡ ಸದಸ್ಯರನ್ನು ಹೊತ್ತುಕೊಂಡು ಹೋಗಿ ಹೊರಹಾಕಿದ್ದಾರೆ.

ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಶಿಷ್ಠಾಚಾರ ಉಲ್ಲಂಘನೆ ಆರೋಪ ಮಾಡಿ ಸದನದಲ್ಲಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ವಿಧೇಯಕಗಳನ್ನು ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಶಾಸಕರನ್ನು ಅಧಿವೇಶನದಿಂದ ಅಮಾನತುಗೊಳಿಸಿ ಸ್ಪೀಕರ್ ಖಾದರ್ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸದಸ್ಯರಾದ ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ, ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜು, ಯಶ್ ಪಾಲ್ ಸುವರ್ಣ, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ, ಭರತ್ ಶೆಟ್ಟಿ ಸೇರಿದಂತೆ 10 ಸದಸ್ಯರು ಅಮಾನತುಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...