
ಬೆಂಗಳೂರು: ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. 10 ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದನ್ನು ವಿರೋಧಿಸಿ ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದು, ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.
ಸರ್ಕಾರದ ವಿರುದ್ಧದ ಬಿಜೆಪಿ ಹೋರಾಟದಲ್ಲಿ ಕುಮಾರಸ್ವಾಮಿ ಜೊತೆಯಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಹೋರಾಟ ನಡೆಸುತ್ತಿದ್ದ ಬಿಜೆಪಿ ಶಾಸಕರು ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಆರಗ ಜ್ಞಾನೇಂದ್ರ, ಆರ್. ಅಶೋಕ್, ಸುನಿಲ್ ಕುಮಾರ್, ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.