
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಜಾರಿ ವೈಫಲ್ಯ ಖಂಡಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ. ವಿಧಾನಸಭೆ ಅಧ್ಯಕ್ಷರು ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ, ಗ್ಯಾರಂಟಿ ಯೋಜನೆ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.