ಬೆಂಗಳೂರು : ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಬಸ್ ಗೆ ಅಡ್ಡಲಾಗಿ ಮಲಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಲ್ಲ, ಕಾನೂನು ಕೈಗೆ ತೆಗೆದುಕೊಂಡರು ಪರವಾಗಿಲ್ಲ, ಕಾವೇರಿಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಪ್ರತಿಭಟನೆ ನಡೆಸಿದ ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲಾ ಕಾರ್ಯಕರ್ತರನ್ನು ಪೊಲೀಸರು ಬಿಎಂಟಿಸಿ ಬಸ್ ನಲ್ಲಿ ತುಂಬಿಕೊಂಡು ಹೋಗಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.