ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು ಸರ್ಕಾರದ ಕ್ರಮ ಖಂಡಿಸಿ, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮೈಸೂರಿನತ್ತ ಸಾಗುವ ವಾಹನಗಳಿಗೆ ಬೆಂಗಳೂರಿನ ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರದ ಶೇಷಗಿರಿ ಫ್ಲಾಜಾದಲ್ಲಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ಕಣಮಿಣಿಕೆ ಹಾಗೂ ಶೇಷಗಿರಿ ಟೋಲ್ ಫ್ಲಾಜಾ ಬಳಿ ಕಾಂಗ್ರೆಸ್ ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಂಡಿದೆ.
ಕೈಯಲ್ಲಿ ಕಪ್ಪು ಬಾವುಟಗಳನ್ನು ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಹಂತದಲ್ಲಿ ಶೇಷಗಿರಿ ಟೋಲ್ ಫ್ಲಾಜಾಗೆ ನುಗ್ಗಲು ಮುಂದಾದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದಾಗ ಪ್ರತಿಭಟನೆ ಇನ್ನಷ್ಟು ತೀವ್ರಗೊಂಡಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಡಿದ್ದಾರೆ.