ಬೆಂಗಳೂರು: ಕಾಂಗ್ರೆಸ್ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಜೂನ್ 20ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಕಾಂಗ್ರೆಸ್ ಜಿಲ್ಲಾ ಘಟಕಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಂದಿನ ಹಂತದಲ್ಲಿ ಬ್ಲಾಕ್ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಬೇಕು ಎಂದು ತಿಳಿಸಿದ್ದಾರೆ.
10 ಕೆಜಿ ಅಕ್ಕಿ ನೀಡುವುದಾಗಿ ಹೇಳಿಕೊಂಡಿದ್ದ ಎಫ್‌ಸಿಐ ನಂತರ ಅಕ್ಕಿ ನೀಡಲು ಹಿಂದೇಟು ಹಾಕಿದೆ. ಹೀಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಜೂನ್ 20ರಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ.