ಕಲಬುರಗಿ: ಶ್ರೀ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಬೆನಕನಹಳ್ಳಿ ಗ್ರಾಮದ ಸಮೀಪ ಇರುವ ಸಿಮೆಂಟ್ ಫ್ಯಾಕ್ಟರಿ ಬಳಿ ಘಟನೆ ನಡೆದಿದೆ.
ಧರಣಿ ನಿರತರ ರೈತ ದೇವೇಂದ್ರಪ್ಪ(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಕಂಪನಿಗೆ ಅವರು ಎರಡು ಎಕರೆ 20 ಗುಂಟೆ ಜಮೀನು ನೀಡಿದ್ದರು. ಶ್ರೀ ಸಿಮೆಂಟ್ ಫ್ಯಾಕ್ಟರಿಗೆ ಭೂಮಿ ನೀಡಿರುವ ನೂರಾರು ರೈತರು ಫ್ಯಾಕ್ಟರಿ ಮುಂದೆ ಧರಣಿ ನಡೆಸಿದ್ದಾರೆ. ಉದ್ಯೋಗ ಮತ್ತು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ 183 ದಿನಗಳಿಂದ ಧರಣಿ ನಡೆಸುತ್ತಿದ್ದು, ಹೋರಾಟದ ಸ್ಥಳದಲ್ಲೇ ದೇವೇಂದ್ರಪ್ಪ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.