ಬೆಂಗಳೂರು: ನಿನ್ನೆಯಷ್ಟೇ ಬಂದ್ ಮೂಲಕ ಬಿಸಿ ಮುಟ್ಟಿಸಿದ್ದ ರೈತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಬೆಳಗ್ಗೆ 11:00 ಗಂಟೆಗೆ ರೈತರು ಬಾರುಕೋಲು ಚಳವಳಿ ನಡೆಸಲಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ರೈತರಿಂದ ಬಾರುಕೋಲು ಚಳವಳಿ ಹಿನ್ನೆಲೆಯಲ್ಲಿ ವಿಧಾನಸೌಧ ಮತ್ತು ರಾಜಭವನದಲ್ಲಿ ಸುತ್ತಮುತ್ತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಬೃಹತ್ ರ್ಯಾಲಿ ನಡೆಸಲಾಗುವುದು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಕಾರ್ಪೊರೇಷನ್ ವೃತ್ತದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಇವತ್ತು ರೈತರು ಮತ್ತು ರಕ್ಷಣಾ ವೇದಿಕೆ ಕಾರ್ಯಕರ್ತರ ಭಾರೀ ಪ್ರತಿಭಟನೆ ಹಿನ್ನಲೆಯಲ್ಲಿ ಪ್ರಮುಖ ರಸ್ತೆಗಳು, ಸಂಪರ್ಕ ರಸ್ತೆಗಳಲ್ಲಿ ಸಂಚಾರ ಅಸ್ಯವ್ಯಸ್ತವಾಗುವ ಸಾಧ್ಯತೆ ಇದೆ. ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಸಲಾಗಿದೆ.