ಹಾಸನ: ಸಾಕಲು ಹಸು ತರುತ್ತಿದ್ದ ರೈತನ ವಾಹನ ಅಡ್ಡಗಟ್ಟಿ ದೌರ್ಜನ್ಯ ಎಸಗಲಾಗಿದೆ. ಬಜರಂಗದಳ ಕಾರ್ಯಕರ್ತ ದೀಪು ವಿರುದ್ಧ ದಲಿತ ಸಂಘಟನೆಗಳ ಕಾರ್ಯಕರ್ತರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ನಗರ ಠಾಣೆ ಎದುರು ರೈತರು, ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹೈನುಗಾರಿಕೆಗಾಗಿ ಹಲಸುಲಿಗೆ ಗ್ರಾಮದ ಮಂಜು ಹಸು ತರುತ್ತಿದ್ದರು. ಈ ವೇಳೆ ಸಕಲೇಶಪುರದಲ್ಲಿ ಬಜರಂಗದಳದ ಕಾರ್ಯಕರ್ತ ದೀಪು ಅಡ್ಡಗಟ್ಟಿ ದೌರ್ಜನ್ಯ ನಡೆಸಿ ಕಸಾಯಿಖಾನೆಗೆ ಹಸುವನ್ನು ಸಾಗಿಸುತ್ತಿದ್ದೀರಿ ಎಂದು ಗಲಾಟೆ ಮಾಡಿದ್ದಾಗಿ ಆರೋಪಿಸಲಾಗಿದೆ.
ಹಸು ಖರೀದಿಸಿದ ಬಿಲ್ ತೋರಿಸಿದರೂ ಬಿಡದೇ ದೌರ್ಜನ್ಯ ನಡೆಸಿದ್ದ ದೀಪುನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪೊಲೀಸ್ ಠಾಣೆ ಎದುರು ವಿವಿಧ ದಲಿತ ಪರ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ನಡೆಸಲಾಗಿದೆ. ನೂರಾರು ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.