ಬೆಂಗಳೂರು: ಫ್ರೀಡಂಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರ ಕಡೆ ಪ್ರತಿಭಟನೆ ನಡೆಸಲು ಹೈಕೋರ್ಟ್ ನಿಷೇಧ ಹೇರಿದ್ದು, ತಕ್ಷಣವೇ ಜಾರಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರು ನಗರದ ಯಾವುದೇ ಭಾಗದಲ್ಲಿ ರಾಜಕೀಯ, ರಾಜಕೀಯ ಹೊರತಾದ ಸಂಘಟನೆಗಳು ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಉಂಟಾಗಿ ಜನತೆಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರುಗಳಿದ್ದ ವಿಭಾಗೀಯ ಪೀಠ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರ ಕಡೆ ಪ್ರತಿಭಟನೆ ನಡೆಸದಂತೆ ನಿಷೇಧಿಸಿದೆ.