ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿವಿಧ ಕಡೆ ಆಕ್ರೋಶ ವ್ಯಕ್ತವಾಗಿದೆ. ಸಚಿವ ಸ್ಥಾನ ವಂಚಿತರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಶಾಸಕರಾದ ಎಂ. ಕೃಷ್ಣಪ್ಪ ಮತ್ತು ಪ್ರಿಯ ಕೃಷ್ಣ ಬೆಂಬಲಿಗರು ಬೆಂಗಳೂರಿನ ರಾಜಭವನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಟಿ.ಬಿ. ಜಯಚಂದ್ರ ಬೆಂಬಲಿಗರು ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಹಾವೇರಿ ಜಿಲ್ಲೆಯಿಂದ ಯಾರಿಗೂ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರಗೊಂಡು ಜಿಲ್ಲೆಯ ಐವರು ಶಾಸಕರು ಗೈರು ಹಾಜರಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳವಳ್ಳಿ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಮಳವಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.
ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಬೆಂಬಲಿಗರು ಮೈಸೂರಿನ ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭದ್ರಾವತಿಯ ಬಿ.ಕೆ. ಸಂಗಮೇಶ್ವರ, ಜೇವರ್ಗಿಯ ಅಜಯ್ ಸಿಂಗ್, ಆಳಂದದ ಬಿ,ಆರ್, ಪಾಟೀಲ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ,
ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಯವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.