ಬೆಂಗಳೂರು: ಶುಲ್ಕ ಪಾವತಿಗೆ ಖಾಸಗಿ ಶಾಲೆಗಳ ಒತ್ತಡ ವಿರೋಧಿಸಿ ಪೋಷಕರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಖಾಸಗಿ ಶಾಲೆಗಳು ಶುಲ್ಕ ಪಾವತಿಗೆ ಒತ್ತಡ ಹೇರುತ್ತಿದ್ದು, ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಪೋಷಕರು ಪ್ರತಿಭಟನೆ ಕೈಗೊಂಡಿದ್ದಾರೆ. ಇಂದು ಸಚಿವರ ಮನೆ ಎದುರು ಕಸ ಗುಡಿಸಲು ಮುಂದಾಗಿದ್ದಾರೆ.
ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ಪೋಷಕರು ಪ್ರತಿಭಟನೆ ಕೈಗೊಂಡಿದ್ದು, ಸಚಿವ ಮನೆ ಬಳಿ ಬ್ಯಾರಿಕೇಡ್ ಹಾಕಿದ್ದ ಪೊಲೀಸರು ಪೋಷಕರನ್ನು ವಶಕ್ಕೆ ಪಡೆದು ಅಲ್ಲಿಂದ ಕಳಿಸಿದ್ದಾರೆ ಎನ್ನಲಾಗಿದೆ.