alex Certify ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸಹೋದರನಿಂದ ಕೊಲೆ ಬೆದರಿಕೆ: ಹಿಂದೂ ಕಾರ್ಯಕರ್ತರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸಹೋದರನಿಂದ ಕೊಲೆ ಬೆದರಿಕೆ: ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಬೆದರಿಕೆ ಹಾಕಿದವನ ಬಂಧಿಸಬೇಕೆಂದು ಒತ್ತಾಯಿಸಿ ಬೆಳ್ಳಾರೆ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಜುಲೈ 26ರಂದು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿತ್ತು. ಕೊಲೆ ಆರೋಪಿ ಶಫೀಕ್ ಸಹೋದರ ಸಫ್ರಿದ್ ಹಿಂದೂ ಕಾರ್ಯಕರ್ತ ಪ್ರಶಾಂತ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಮಾಡಿದ ಸಫ್ರಿದ್ ಹಿಂದೂ ಕಾರ್ಯಕರ್ತ ಪ್ರಶಾಂತ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರೋಪಿ ಬಂಧನಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...