ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ನಿರ್ಧರಿಸಿದೆ.
ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರನ್ನು ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಕ್ಲರ್ಕ್, ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಸಿ ದರ್ಜೆ, ಅಟೆಂಡರ್, ಕ್ಲೀನರ್, ವಾಟರ್ ಮ್ಯಾನ್ ಗಳಿಗೆ ಬಿ ದರ್ಜೆ ಸ್ಥಾನಮಾನ ನೀಡಬೇಕು. ನಗರ ಮತ್ತು ಪಟ್ಟಣ ಪಂಚಾಯಿತಿ ಮಾದರಿ ವೇತನ ಶ್ರೇಣಿ ನಿಗದಿಪಡಿಸಬೇಕು. ನಿವೃತ್ತರಾದ ನೌಕರರಿಗೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಡಿಸೆಂಬರ್ 19ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.