
ಹರಿದ್ವಾರ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ WFI ಅಧ್ಯಕ್ಷ ಬ್ರಿಜ್ ಭೂಷಣ್ ಅವರ ವಿರುದ್ಧ ರಾಷ್ಟ್ರೀಯ ಅಂತರಾಷ್ಟ್ರೀಯ ಕುಸ್ತಿಪಟುಗಳು ಉತ್ತರಕಾಂಡ್ ನ ಹರಿದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
WFI ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಕುಸ್ತಿಪಟುಗಳು ಪ್ರತಿಭಟನೆಯ ಸಂಕೇತವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾ ನದಿಯಲ್ಲಿ ಮುಳುಗಿಸಲು ಮುಂದಾಗಿದ್ದಾರೆ.
ರಸ್ತೆಯಲ್ಲಿ ಕುಳಿತು ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ. ಧರಣಿ ನಿರತ ಕುಸ್ತಿಪಟುಗಳಿಗೆ ಉತ್ತರಾಖಂಡ ಜನ ಬೆಂಬಲ ಸೂಚಿಸಿದ್ದಾರೆ.