ನವದೆಹಲಿ: ಹೋರಾಟ ವೇಳೆಯಲ್ಲಿಯೇ ರೈತರೊಬ್ಬರು ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ರೈತರು ಪ್ರತಿಭಟನೆ ಕೈಗೊಂಡಿದ್ದು, ಅಮರ್ ಸಿಂಗ್(39) ಎಂಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ಸಂಜೆ ವಿಷ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಐಟಿ ಸೆಲ್ ಸಂಚಾಲಕ ಅಜಿತ್ ಸಿಂಗ್ ತಿಳಿಸಿದ್ದಾರೆ.
ನಮ್ಮ ಹೋರಾಟವನ್ನು ಮುಂದುವರೆಸೋಣ ಎಂದು ಅಮರಿಂದರ್ ಸಿಂಗ್ ರೈತರಲ್ಲಿ ಮನವಿ ಮಾಡಿದ್ದರು. ಆದರೆ, ಅವರು ದಿಢೀರ್ ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಭಾರತ ಕಿಸಾನ್ ಯೂನಿಯನ್ ಕಾರ್ಯದರ್ಶಿ ಜಗಮೋಹನ್ ಸಿಂಗ್ ತಿಳಿಸಿದ್ದಾರೆ.