alex Certify ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು : ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜನೆವರಿ 1. 2024ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಪರಿಷ್ಕೃ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು ಜನೆವರಿ 12. 2024ಕ್ಕೆ ವಿಸ್ತರಿಸಲಾಗಿದ್ದು. ದತ್ತಾಂಶಗಳನ್ನು ಕ್ರೂಢೀರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನೆವರಿ 17. 2024ಕ್ಕೆ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕವನ್ನು ಜನೆವರಿ 22. 2024ಕ್ಕೆ ವಿಸ್ತರಿಸಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆ-2024ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಜನೆವರಿ 01. 2024ಕ್ಕೆ 18ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿಯನ್ನು ಸಲ್ಲಿಸಬಹುದು. ಹೆಸರು, ವಿಳಾಸ ಮತ್ತು ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ಡಿಸೆಂಬರ್ 27. 2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ (VHA App) ಬಳಸಿ, www.nvsp.in ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ https://ceo.karnataka.gov.in  ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಹೆಲ್ಪ್‍ಲೈನ್ ನಂ. 1950ಕ್ಕೆ ಕರೆ ಮಾಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ-6 ನ್ನು ಭರ್ತಿಮಾಡಿ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...