alex Certify ಗಮನಿಸಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ನಿಬಂಧನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ನಿಬಂಧನೆ

Ganesh Chaturthi 2022: ಗಣೇಶನನ್ನು ನೀರಿನಲ್ಲಿ ವಿಸರ್ಜನೆ ಮಾಡುವುದೇಕೆ ? ಅಮ್ಮ ಹೇಳಿದ ಕಥೆ - Ganesh chaturthi 2022 why dissolve ganesha in water a story told by mom akp au53 Kannada News

ಶಿವಮೊಗ್ಗ: ಸೆಪ್ಟೆಂಬರ್ 18 ರಂದು ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪ ಬಳಸಲು ಜಿಲ್ಲಾಧಿಕಾರಿ ಡಾ.‌ ಸೆಲ್ವಮಣಿ ಆರ್ ಅವಕಾಶ ನೀಡಿ ಆದೇಶಿಸಿದ್ದಾರೆ.

ತೆಪ್ಪದ ಮೂಲಕ ಗಣೇಶ ವಿಸರ್ಜನೆ ಮಾಡುವ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಪ್ಪಿಸಲು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಹಾಗೂ ಕಡ್ಡಾಯವಾಗಿ ಲೈಫ್-ಜಾಕೆಟ್, ನುರಿತ ಈಜುಗಾರರು ಇದ್ದು ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...