alex Certify ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಚಿತ್ರದುರ್ಗ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಈ ಕುರಿತು ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನವಾಗಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮುರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 64 ಅಂಗನವಾಡಿ ಕಾರ್ಯಕರ್ತೆ, 03 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 149 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲು 2024ರ ಜುಲೈ 29ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಈ ಹುದ್ದೆಗಳ ನೇಮಕಾತಿಗಾಗಿ 2025ರ ಮಾರ್ಚ್ 20ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಪರಿಷ್ಕ್ರತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕ, ಅಂಗನವಾಡಿ ಕೇಂದ್ರಗಳ ಮುಂದೆ, ಗ್ರಾಮ ಪಂಚಾಯತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದ್ದು, ಈ ಆಯ್ಕೆ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ 2025ರ ಏಪ್ರಿಲ್ 05ರ ಸಂಜೆ 5.30 ಗಂಟೆಯೊಳಗೆ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು. ತಡವಾಗಿ ಬಂದ ಹಾಗೂ ಸೂಕ್ತ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...