ಬೆಂಗಳೂರು : ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾಗಿದೆಈ ಪಟ್ಟಿಯಲ್ಲಿ ಹೆಸರು ಪಡೆದಿರುವ ಅಭ್ಯರ್ಥಿಗಳು ಈಗ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾಗಿದೆ.
ಒಟ್ಟು 30 ಜಿಲ್ಲೆಗಳು ಸಹ ತಮ್ಮ ತಮ್ಮ ಜಿಲ್ಲಾ ಅಧಿಕೃತ ವೆಬ್ಸೈಟ್ಗಳಲ್ಲಿ, ತಮ್ಮ ಜಿಲ್ಲೆಯಲ್ಲಿ ಭರ್ತಿ ಮಾಡಲಿರುವ ಹುದ್ದೆಗಳಿಗೆ ಅನುಗುಣವಾಗಿ 1:3 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿವೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸಿದ ಜಿಲ್ಲೆಯ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಹತಾ ಪಟ್ಟಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಹೇಗೆ ಚೆಕ್ ಮಾಡಬಹುದು..?
• ಒಂದು ವೇಳೆ ನೀವು ಮಂಡ್ಯ ಜಿಲ್ಲೆಯ ಅಭ್ಯರ್ಥಿಗಳಾಗಿದ್ದಲ್ಲಿ manday.nic.in ಗೆ ಭೇಟಿನೀಡಿ.
• ಬಳಿಕ ಮುಖಪುಟದಲ್ಲಿ ನೇಮಕಾತಿ ಮೆನು ಆಯ್ಕೆ ಮಾಡಿ.
• – ನಂತರ ಓಪನ್ ಆಗುವ ವೆಬ್ಪೇಜ್ನಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಲಿಂಕ್ ಇರುತ್ತದೆ.
• – ನಿಮ್ಮ ಹೆಸರು ಇರುವ ಬಗ್ಗೆ ಚೆಕ್ ಮಾಡಿಕೊಳ್ಳಿ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.