ಬೆಂಗಳೂರು : ಪ್ರಚೋದನಕಾರಿ ಭಾಷಣ ಸಂಬಂಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಚೋದನಕಾರಿ ಭಾಷಣ ಮಾಡಿದ ಸಂಬಂಧ 6 ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನಗೌಡ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಶ್ರೀರಾಮಸೇನಾ ಕಚೇರಿ ಉದ್ಘಾಟನೆ ಹಾಗೂ ಶಿವಾಜಿ ಮಹಾರಾಜ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವೇಳೆ ಭಾಷಣ ಮಾಡಿದ್ದ ಪ್ರಮೋದ್ ಮುತಾಲಿಕ್ ‘ಗೋವಿನ ಹತ್ಯೆ ಮಾಡಿದವರ ಕೈ ಕಡಿಯಬೇಕು’ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಪ್ರಕರಣದ ರದ್ದು ಕೋರಿ ಮುತಾಲಿಕ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಮುತಾಲಿಕ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನಗೌಡ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.