alex Certify ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ತುಮಕೂರು: ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಕಿರುಕುಳ ನೀಡಿದ್ದ ಯುವಕನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.

ತುಮಕೂರು ನಗರದ ಎಂಜಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಬಂದೋಬಸ್ತ್ ನಲ್ಲಿದ್ದ ಮಹಿಳಾ ಪಿಎಸ್ಐಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಗಣಪತಿ ಮಹೋತ್ಸವದ ವಿಸರ್ಜನಾ ಪೂರ್ವ ಮೆರವಣಿಗೆ ತುಮಕೂರಿನ ಎಂಜಿ ರಸ್ತೆಗೆ ಬಂದ ಸಂದರ್ಭದಲ್ಲಿ 26 ವರ್ಷದ ದರ್ಶನ್ ಎಂಬಾತ ಸಾರ್ವಜನಿಕರ ಎದುರಲ್ಲೇ ಕರ್ತವ್ಯ ನಿರತರಾಗಿದ್ದ ಮಹಿಳಾ ಪಿಎಸ್ಐ ಮೈಮುಟ್ಟಿದ್ದಾನೆ. ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...