alex Certify ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಇಲಾಖೆ ವಿಚಾರಣೆಗೆ ಆದೇಶಿಸಿದ್ದಾರೆ.

ಹಲ್ಲೆ, ಜಾತಿನಿಂದನೆ, ಜೀವ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಪಿಎಸ್ಐ ಮಣಿಕಂಠ ವಿರುದ್ಧ ಈರಣ್ಣ ಎಂಬುವರು ದೂರು ನೀಡಿದ್ದರು. ಈರಣ್ಣನ ಮೇಲೆ ಪಿಎಸ್ಐ ಹಲ್ಲೆ ನಡೆಸಿದ್ದ ಹಿನ್ನೆಲೆಯಲ್ಲಿ ಕೊಳೂರು ಗ್ರಾಮಸ್ಥರು ಅವರ ವಿರುದ್ಧ ಧರಣಿ ನಡೆಸಿದ್ದರು. ಪಿಎಸ್ಐ ಮಣಿಕಂಠ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದಾದ ನಂತರ ಇಂದು ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಈ ವೇಳೆ ಸ್ಥಳದಲ್ಲಿ ನಿಂತಿದ್ದ ಈರಣ್ಣನಿಗೆ ಘಟನೆಗೆ ನೀನೇ ಕಾರಣ ಎಂದು ಆರೋಪಿಸಿ ಪಿಎಸ್ಐ ಮಣಿಕಂಠ ಸಾರ್ವಜನಿಕರ ಎದುರಲ್ಲೇ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧೀಕ್ಷಕರು ಅಮಾನತು ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...