
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಮತ್ತೊಂದು ದೊಡ್ಡಬೇಟೆಯಾಡಿದ್ದು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮದ ರೂವಾರಿಯಾಗಿರುವ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ವಿಚಾರಣೆ ಬಳಿಕ ಅವರನ್ನು ಬಂಧಿಸಿದ್ದಾರೆ. ಇದರೊಂದಿಗೆ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಐವರು ಅಧಿಕಾರಿಗಳನ್ನು ಬಂಧಿಸಲಾಗಿದೆ.