
ಬೆಂಗಳೂರು: ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ರಂದು ನಡೆಯಲಿದೆ. ಜನವರಿ 17ರಂದು ಬೆಳಿಗ್ಗೆ 11 ಗಂಟೆಯಿಂದ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.
ಪ್ರಾಧಿಕಾರದ ವೆಬ್ ಸೈಟ್ http://kea.jar.nic.in ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ, ಹೆಸರು ನಮೂದಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಜನವರಿ 23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ವಸ್ತ್ರ ಸಂಹಿತೆ ಸೇರಿದಂತೆ ಸೂಚನೆಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಪ್ರಾಧಿಕಾರ ತಿಳಿಸಿದೆ.