
ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಡಿಸೆಂಬರ್ 20 ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.
ಕೆಎಸ್ಆರ್ಪಿ ಮತ್ತು ರಾಜ್ಯ ಕೈಗಾರಿಕಾ ಭದ್ರತಾ ಪಡೆಗಳಿಗೆ ಅಂದಾಜು 7240 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ನೀಡಲಾಗಿದೆ. www.ksp.gov.in ವೆಬ್ ಸೈಟ್ ನಲ್ಲಿ ಪ್ರವೇಶಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರ ಪಡೆದು ಪರೀಕ್ಷೆಗೆ ಹಾಜರಾಗಬಹುದಾಗಿದೆ ಎಂದು ಹೇಳಲಾಗಿದೆ.