alex Certify BIG NEWS: ಸೆ. 22ರ PSI ಪರೀಕ್ಷೆ ಮುಂದೂಡಿಕೆ ಇಲ್ಲ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಬಿಗಿ ಭದ್ರತೆ: ಎಐ ತಂತ್ರಜ್ಞಾನ ಬಳಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೆ. 22ರ PSI ಪರೀಕ್ಷೆ ಮುಂದೂಡಿಕೆ ಇಲ್ಲ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಬಿಗಿ ಭದ್ರತೆ: ಎಐ ತಂತ್ರಜ್ಞಾನ ಬಳಕೆ

ಬೆಂಗಳೂರು: ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಎಐ ತಂತ್ರಜ್ಞಾನ ಆಧಾರದಲ್ಲಿ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಕಳುಹಿಸಲು ತೀರ್ಮಾನಿಸಿದೆ.

ಈಗಾಗಲೇ ನಿಗದಿಯಾಗಿರುವಂತೆ ಸೆಪ್ಟಂಬರ್ 22ರಂದು ಪರೀಕ್ಷೆ ನಡೆಯಲಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಒಮ್ಮೆ ಪರೀಕ್ಷೆ ಮುಂದೂಡಲಾಗಿದ್ದು, ಮತ್ತೆ ಪರೀಕ್ಷೆ ಮುಂದೂಡುವುದಿಲ್ಲ. ಪುನಃ ಪರೀಕ್ಷೆ ಮುಂದೂಡಿದಲ್ಲಿ ಯಾವುದಾದರೂ ಒಂದು ಪರೀಕ್ಷೆ ಇದ್ದೇ ಇರುತ್ತದೆ. ಹಾಗೆಂದು ಪರೀಕ್ಷೆ ಇಲ್ಲದ ದಿನ ಹುಡುಕುವುದು ಕೂಡ ಕಷ್ಟ. ಈ ದಿನಾಂಕವನ್ನು 3 ತಿಂಗಳ ಮೊದಲೇ ತೀರ್ಮಾನಿಸಲಾಗಿದ್ದು, ಆ ಪ್ರಕಾರವೇ ಸೆಪ್ಟೆಂಬರ್ 22 ರಂದು ಪರೀಕ್ಷೆ ನಡೆಯಲಿದೆ. ಕೆಲವರು ಜಾಲತಾಣಗಳಲ್ಲಿ ಪರೀಕ್ಷೆ ಮುಂದೂಡಲು ಒತ್ತಡ ಹೇರುತ್ತಿದ್ದು, ಅದಕ್ಕೆ ಕಿವಿಗೊಡಬಾರದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ 164 ಕೇಂದ್ರಗಳಲ್ಲಿ ಸೆ. 22ರಂದು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೆಚ್ಚಿನ ನಿಗಾ ಇಡಲು ಪೊಲೀಸ್ ಇಲಾಖೆಯ ನೆರವು ಕೋರಲಾಗಿದೆ. ಗೃಹ ಸಚಿವರು, ಡಿಜಿಪಿಗೆ ಪತ್ರ ಬರೆಯಲಾಗಿದ್ದು, ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡ, ದಾವಣಗೆರೆ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು. ಈ ವಿಚಾರದಲ್ಲಿ ಯಾವ ಅನುಮಾನವೂ ಬೇಡ. ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗದಂತೆ ಪರೀಕ್ಷೆ ನಡೆಸಲಾಗುವುದು. ಇದು ನಮ್ಮ ಬದ್ಧತೆಯಾಗಿದೆ. ಅಕ್ರಮಗಳಿಗೆ ಅವಕಾಶವೇ ಇಲ್ಲದಂತೆ ನಿಗಾ ವಹಿಸಲಾಗುವುದು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಯಾವ ರೀತಿ ತಪಾಸಣೆ ನಡೆಸುತ್ತಾರೋ ಅದೇ ರೀತಿಯ ತಪಾಸಣೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ನಡೆಯಲಿದೆ ಎಂದು ತಿಳಿಸಿದ್ದಾರೆ.

ದೈಹಿಕ ಪರೀಕ್ಷೆಯ ಸಂದರ್ಭದಲ್ಲಿ ಅಭ್ಯರ್ಥಿಗಳ ಹೆಬ್ಬೆಟ್ಟು ಗುರುತು, ಭಾವಚಿತ್ರ ಸಂಗ್ರಹಿಸಿದ್ದು, ಅದೇ ಡೇಟಾ ಬಳಸಿಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಗುವುದು. ನಕಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ನುಸುಳಲು ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...