alex Certify BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ

ಬೆಳಗಾವಿ: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು ಮುಂಡೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿ ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು 3-6 ತಿಂಗಳ ಕಾಲ ಮುಂದೂಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ ಎಂದರು.

ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಮರುಪರೀಕ್ಷೆ ದಿನಾಂಕವನ್ನು 2024ರ ಜನವರಿ 23ಕ್ಕೆ ಮುಂದೂಡಲಾಗಿದೆ. ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...