ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ. ಪ್ರಕರಣ ರದ್ದು ಮಾಡಬೇಕೆಂದು ಕೋರಿ ಇಬ್ಬರು ಆರೋಪಿಗಳು ಅರ್ಜಿ ಸಲ್ಲಿಸಿದ್ದಾರೆ.
ರಚನಾ ಮತ್ತು ಜಾಗೃತ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷಾ ಅಕ್ರಮ ನಡೆಯಲು ಸಾಧ್ಯವಿಲ್ಲವೆಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿಯ ಸ್ವಯಂಪ್ರೇರಿತ ಪ್ರಕರಣ ತನಿಖೆ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದೆ.
ಇನ್ನು 545 ಪಿಎಸ್ಐ ಹುದ್ದೆಗಳಿಗೆ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಒಟ್ಟು ನಾಲ್ವರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಇಬ್ಬರು ಪೊಲೀಸ್ ಅಧಿಕಾರಿಗಳನ್ನು 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.