alex Certify ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

ಪಿಎಸ್ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ ವ್ಯವಸ್ಥೆಯನ್ನು ಹಂತ ಹಂತವಾಗಿ ನಾವೇ ಡ್ಯಾಮೇಜ್ ಮಾಡಿದ್ದೇವೆ. ಇಂತಹ ವ್ಯವಸ್ಥೆ ಸಂಪೂರ್ಣವಾಗಿ ನಿಲ್ಲಿಸಲು ಕಠಿಣ ಕ್ರಮ ಆಗಬೇಕಿದೆ. ಈ ಚರ್ಚೆಯ ಮೂಲಕ ಯುವಕರಿಗೆ ಒಂದು ಸಂದೇಶ ಕೊಡಬೇಕಿದೆ. ಈ ಬಗ್ಗೆ ಎಲ್ಲಾ ಸದಸ್ಯರಿಗೂ ನಾನು ಮನವಿ ಮಾಡುತ್ತೇನೆ. ಇಲ್ಲಿಯವರೆಗೂ ಪಾರದರ್ಶಕ ತನಿಖೆ ನಡೆಸಿ ನಂಬಿಕೆ ಮೂಡಿಸಿದ್ದೀರಿ. ಅದರಂತೆ ತನಿಖೆಯಲ್ಲಿ ಇನ್ನೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...