ಬೆಂಗಳೂರು: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
30 ಲಕ್ಷ ರೂಪಾಯಿ ನೀಡಿ ಯಾದಗಿರಿ ನಗರಕ್ಕೆ ಪರಶುರಾಮ್ ಪೋಸ್ಟಿಂಗ್ ಮಾಡಿಸಿಕೊಂಡಿದ್ದರು. ವರ್ಷ ಪೂರ್ಣಗೊಳ್ಳುವ ಮೊದಲೇ ಯಾದಗಿರಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಸಾಲದ ಸುಳಿಗೆ ಅವರು ಸಿಲುಕಿದ್ದರು. ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಅವರ ಕಿರುಕುಳದಿಂದ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ಪತ್ನಿ ಶ್ವೇತಾ ಅವರು ಯಾದಗಿರಿ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.