ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ ಎಂದು ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೇಳಿದ್ದಾರೆ.
ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಸಿಐಡಿ ತನಿಖೆಗೆ ನಾವು ಬದ್ಧರಾಗಿರುತ್ತೇವೆ. ಸಿಐಡಿ ವಿಚಾರಣೆಗೆ ಕರೆದರೆ ತಪ್ಪದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಪಿಎಸ್ಐ ಪರಶುರಾಮ್ ಜೊತೆಗೆ ನಾನು ಮಾತನಾಡಿರಲಿಲ್ಲ. ನನ್ನ ಪುತ್ರನ ವಿರುದ್ಧದ ಆರೋಪ ಕೂಡ ಸತ್ಯಕ್ಕೆ ದೂರವಾಗಿದೆ. ನನ್ನ ವಿರುದ್ಧ ಷಡ್ಯಂತ್ರ ನಡೆದಿರಬಹುದು. ಯಾವುದೇ ಶಾಸಕರಾಗಲಿ ಜಾತಿ ನಿಂದನೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.