ಬೆಂಗಳೂರು: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ಸಾವಿನ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಭಾನುವಾರ ಬ್ರೇಕ್ ನೀಡಿರುವ ಅಶೋಕ್ ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಕೊಪ್ಪಳ ಜಿಲ್ಲೆಯ ಕಾರಟಗಿಗೆ ತೆರಳಲಿದ್ದಾರೆ. ಮಧ್ಯಾಹ್ನ 1:30 ಸುಮಾರಿಗೆ ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಅಲ್ಲಿಂದ ಹೊರಟು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.