ಬೆಂಗಳೂರು: ಪಿಎಸ್ ಐ, ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಎಸ್ ಐ ಲಿಂಗಯ್ಯನನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಇಂಟಲಿಜನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿರುವ ಲಿಂಗಯ್ಯನನ್ನು ನಿನ್ನೆ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಲಿಂಗಯ್ಯ ವಾಟ್ಸಪ್ ಚಾಟ್ ನ ಒಂದಿಷ್ಟು ಸ್ಕ್ರೀನ್ ಶಾಟ್ ಗಳು ಕೂಡ ವೈರಲ್ ಆಗಿವೆ. ಅವರು ಯಾರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಲಿಂಗಯ್ಯ ಮಾತುಕತೆ ನಡೆಸಿದವರನ್ನು ವಶಕ್ಕೆ ಪಡೆಯಲು ಸಿಸಿಬಿ ಮುಂದಾಗಿದೆ.
ಜನವರಿ 23ರಂದು ಪಿಎಸ್ ಐ ನೇಮಕಾತಿ ಮರು ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ತಯಾರಿ ಮಾಡಿಕೊಂಡಿದ್ದಾರೆ. ಆದರೆ ಇದೀಗ ಈ ಪರೀಕ್ಷೆ ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದ್ದು, ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಸಿಬಿ ಇಂಟಲಿಜನ್ಸ್ ವಿಭಾಗದ ಸಬ್ಇನ್ಸ್ ಪೆಕ್ಟರ್ ನ್ನು ವಶಕ್ಕೆ ಪಡೆದಿದೆ.