
ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 6 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ನಿರಂತರ ವಿಚಾರಣೆ ನಡೆಸಿದ ನಂತರ ಪೊಲೀಸ್ ನೇಮಕಾತಿ ವಿಭಾಗದ 6 ಮಂದಿಯನ್ನು ಬಂಧಿಸಲಾಗಿದೆ. ಇವರನ್ನು ಪೊಲೀಸ್ ನೇಮಕಾತಿ ವಿಭಾಗದಲ್ಲಿ ಅಕ್ರಮ ನಡೆಸಲು ಡಿವೈಎಸ್ಪಿ ನೇಮಿಸಿದ್ದರು. ಇವರು ಡಿವೈಎಸ್ಪಿ ಶಾಂತಕುಮಾರ್ ಸೂಚನೆಯಂತೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದ ಬಗ್ಗೆ ತನಿಖೆ ಮುಂದುವರೆಸಿರುವ ಸಿಐಡಿ ಅಧಿಕಾರಿಗಳು ಅಕ್ರಮಕ್ಕೆ ನೆರವಾಗಿದ್ದ ಮತ್ತಷ್ಟು ಸಿಬ್ಬಂದಿ ಮತ್ತು ಮಧ್ಯವರ್ತಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.