ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸಹಚರನನ್ನು ಬಂಧಿಸಲಾಗಿದೆ. ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ಪ್ರಕಾಶ್ ಬಂಧಿತ ಆರೋಪಿ. ಈತನನ್ನ ಸಿಐಡಿ ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ. ಕಲಬುರ್ಗಿಯಲ್ಲಿ ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 33 ಆರೋಪಿಗಳನ್ನು ಬಂಧಿಸಲಾಗಿದೆ.
ರುದ್ರಗೌಡ ಪಾಟೀಲ್ ಮನೆಯಲ್ಲಿ ಈಗ ಬಂಧಿತನಾಗಿರುವ ಪ್ರಕಾಶ್ ಕೆಲಸ ಮಾಡುತ್ತಿದ್ದ. ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ನೀಡುವುದು ಹಣ ಸಂಗ್ರಹಿಸುವುದು ಸೇರಿದಂತೆ ಹಲವು ಕೆಲಸ ಮಾಡುತ್ತಿದ್ದ. ಆರೋಪಿ ಪ್ರಕಾಶ್ ನನ್ನು 13 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಕೋರ್ಟ್ ನೀಡಿದ್ದು, ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕತೊಡಗಿದ್ದಾರೆನ್ನಲಾಗಿದೆ.