ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದ್ದು, ಇಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಯಾವುದೇ ಅಕ್ರಮ ನಡೆದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದು, ಅವರು ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣ ನಡೆದೇ ಇಲ್ಲ ಎಂದು ಸದನದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವರು ಸದನದ ದಾರಿ ತಪ್ಪಿಸಿದ್ದರು. ಅವರು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಇಂದು ಸಿದ್ದರಾಮಯ್ಯ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿರುವ ಡಿ.ಕೆ. ಶಿವಕುಮಾರ್, ಇನ್ನೂ ಹಲವರು ಭಾಗಿಯಾದ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.