ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಪಿಎಸ್ಐಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಆಯ್ಕೆಪಟ್ಟಿ ರದ್ದುಪಡಿಸಿ ಹೊಸ ಪರೀಕ್ಷೆಗೆ ಸರ್ಕಾರ ನಿರ್ಧರಿಸಿದ್ದು, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ನಿಂದ ಇಂದು ತೀರ್ಪು ಪ್ರಕಟಿಸಲಿದ್ದು, ಆಯ್ಕೆಯಾಗಿದ್ದ ಪಿಎಸ್ಐಗಳ ಭವಿಷ್ಯ ನಿರ್ಧಾರವಾಗಲಿದೆ.
ಸರ್ಕಾರ ನೇಮಕಾತಿ ಆದೇಶ ರದ್ದು ಮಾಡಿರುವುದನ್ನು ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ ನೂರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. 2023ರ ಅಕ್ಟೋಬರ್ 26ರಂದು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಲಾದ ತೀರ್ಪನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಪ್ರಕಟಿಸಲಿದೆ.