ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ಕಿಂಗ್ ಪಿನ್ ರುದ್ರಗೌಡ ಪಾಟೀಲನ ಅಳಿಯ ಪ್ರಕಾಶ್ ನನ್ನು ಬಂಧಿಸಲಾಗಿದೆ.
ಆರೋಪಿ ಪ್ರಕಾಶ್ ಅಭ್ಯರ್ಥಿಗಳಿಗೆ ಬ್ಲೂಟೂತ್ ಗಳನ್ನು ನೀಡುತ್ತಿದ್ದ ಬಗ್ಗೆ ಮಾಹಿತಿ ಕಲೆಹಾಕಿದ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ರುದ್ರಗೌಡ ಪಾಟೀಲ್ ಸೂಚನೆ ಮೇರೆಗೆ ಅಭ್ಯರ್ಥಿಗಳಿಗೆ ಪ್ರಕಾಶ್ ಬ್ಲೂಟೂತ್ ಗಳನ್ನು ನೀಡುತ್ತಿದ್ದ. ಇದರೊಂದಿಗೆ ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಇದುವರೆಗೆ ಒಟ್ಟು 38 ಜನರನ್ನು ಬಂಧಿಸಿದಂತಾಗಿದೆ.