
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಅವರನ್ನು ಬಂಧಿಸಲಾಗಿದೆ. ಪಿಎಸ್ಐ ಅಭ್ಯರ್ಥಿ ಪರ ಡೀಲ್ ಕುದುರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಶರತ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.