ಬೆಂಗಳೂರು: ಡಿವೈಎಸ್ಪಿ P. ಶಾಂತಕುಮಾರ್ ಅವರನ್ನು 4 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದಲ್ಲಿ ಅಕ್ರಮವೆಸಗಿದ್ದ ಅಧಿಕಾರಿಗಳನ್ನು ಸಿಐಡಿ ವಶಕ್ಕೆ ನೀಡಿ ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಡಿವೈಎಸ್ಪಿ ಶಾಂತಕುಮಾರ್, ಪ್ರಥಮ ದರ್ಜೆ ಸಹಾಯಕ ಹರ್ಷ, ಹೆಡ್ ಕಾನ್ಸ್ ಟೇಬಲ್ ಶ್ರೀಧರ್, ಶ್ರೀನಿವಾಸ ಅವರನ್ನು ನಾಲ್ಕು ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ. ನೇಮಕಾತಿ ವಿಭಾಗದಲ್ಲಿ ಈ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದರು.