alex Certify ಪಿಎಸ್ಐ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 63 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಜನವರಿ 29ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಜನವರಿ 29ಕ್ಕೆ ಲಿಖಿತ ಪರೀಕ್ಷೆ ನಿಗದಿ ಮಾಡಿ ಆದೇಶಿಸಿದೆ. 2021 – 22ರಲ್ಲಿ ಕೈಗಾರಿಕಾ ಭದ್ರತಾ ಪಡೆ ವಿಭಾಗದ ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 545 ಪಿಎಸ್ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನೇಮಕಾತಿಯನ್ನು ನಿಲ್ಲಿಸಲಾಗಿತ್ತು.

ಜನವರಿ 8ರಂದು ಸಿಎಆರ್ ಅಂಡ್ ಡಿಎಆರ್ ವಿಭಾಗದ ಪಿಎಸ್ಐ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಜನವರಿ 29ರಂದು ಕೈಗಾರಿಕಾ ಭದ್ರತಾ ವಿಭಾಗದ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...