ಬೆಂಗಳೂರು: ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 28ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿದ್ದು, ಸೆ. 22 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಪಿಎಸ್ಐ ಪರೀಕ್ಷೆ ಆಕಾಂಕ್ಷಿಗಳಲ್ಲಿ ಹಲವರು ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯುತ್ತಿದ್ದು, ಹೀಗಾಗಿ ಪರೀಕ್ಷೆಯ ದಿನ ಮುಂದೂಡುವಂತೆ ಮನವಿ ಮಾಡಲಾಗಿತ್ತು.
ಕೆಇಎ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರೀಕ್ಷೆ ಮುಂದೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.