ತುಮಕೂರು: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳಾಂತ್ಯಕ್ಕೆ ನೇಮಕಾತಿ ಆದೇಶ ಪತ್ರ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣದಿಂದ ಪಿಎಸ್ಐ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. 403 ಪಿಎಸ್ಐಗಳ ನೇಮಕಾತಿ ಪ್ರಕ್ರಿಯೆಗೆ ಪರೀಕ್ಷೆ ನಡೆದಿದೆ. ಇದರೊಂದಿಗೆ 600 ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಕೂಡ ಆರಂಭಿಸಲಾಗುವುದು. ಅಂತಿಮವಾಗಿ 1,500 ಪಿಎಸ್ಐಗಳ ನೇಮಕವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
3500 ಕೆ.ಎಸ್.ಆರ್.ಪಿ. ಕಾನ್ ಸ್ಟೆಬಲ್ ನೇಮಕಾತಿ ಪ್ರಕ್ರಿಯೆ ನಡೆದಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ 20 ಸಾವಿರ ಪೊಲೀಸ್ ಕಾನ್ ಸ್ಟೆಬಲ್ ಗಳ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.