ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 2020 -21 ನೇ ಸಾಲಿನಲ್ಲಿ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ.
ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಪರೀಕ್ಷೆ ಅಕ್ರಮದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಉತ್ತೀರ್ಣರಾಗಿದ್ದ ಕೆಲವು ಅಭ್ಯರ್ಥಿಗಳನ್ನು ಸಿಐಡಿ ತನಿಖೆ ನಡೆಸಿತ್ತು. ರಾಜ್ಯ ಸರ್ಕಾರಕ್ಕೆ ಸಿಐಡಿಯಿಂದ ಮಧ್ಯಂತರ ತನಿಖಾ ವರದಿ ಸಲ್ಲಿಕೆಯಾಗಿದ್ದು, ವರದಿಯನುಸಾರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದೆ. 2020 -21 ನೇ ಸಾಲಿನಲ್ಲಿ ನಡೆಸಲಾಗಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.
ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತಮಗೆ ನ್ಯಾಯ ದೊರಕಿಸಿಕೊಡಬೇಕು. ನೇಮಕಾತಿ ರದ್ದು ಮಾಡಬಾರದು ಎಂದು ಆಗ್ರಹಿಸಿದ್ದಾರೆ. ಆದರೆ, ಸರ್ಕಾರ ಅಕ್ರಮ ನಡೆದ ಕಾರಣಕ್ಕೆ ಅಧಿಕೃತವಾಗಿ ನೇಮಕಾತಿ ರದ್ದುಗೊಳಿಸಿದೆ ಎನ್ನಲಾಗಿದೆ.