ಹುಬ್ಬಳ್ಳಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಸರ್ಕಾರ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕೆ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಅಕ್ರಮ ಎಸಗಿದ್ದಕ್ಕೆ ಇಡೀ ಪರೀಕ್ಷೆ ರದ್ದು ಮಾಡುವುದಾಗಿ ಹೇಳಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆಯನ್ನು ರದ್ದುಮಾಡಿ ಮರು ಪರೀಕ್ಷೆ ನಡೆಸುವ ಬದಲು ನಮಗೆ ವಿಷ ಕೊಟ್ಟು ಬಿಡಲಿ ಎಂದು ಪಿಎಸ್ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಪಿಎಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ. ಸರ್ಕಾರ ಮರು ಪರೀಕ್ಷೆ ಮಾಡುವ ನಿರ್ಧಾರದಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಸರ್ಕಾರ ನ್ಯಾಯ ಕೊಡಿಸಬೇಕು ಎಂದು ಹೇಳಿದ್ದಾರೆ.
ಮನವಿ ಸ್ವೀಕರಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.