ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಎ 1 ಆರೋಪಿ ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ರಚನಾಗೆ ಜಾಮೀನು ಮಂಜೂರು ಮಾಡಲಾಗಿದೆ. ಆರೋಪಿಗಳ ಪರ ಶ್ಯಾಮಸುಂದರ್ ವಾದ ಮಂಡಿಸಿದ್ದರು.
545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪಿ ರಚನಾಳನ್ನು ಇತ್ತೀಚೆಗೆ ಸಿಐಡಿ ಅಧಿಕಾರಿಗಳು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಬಂಧಿಸಿದ್ದರು. ಪಿಎಸ್ಐ ನೇಮಕಾತಿಗಾಗಿ ರಚನಾ 30 ಲಕ್ಷ ನೀಡಿದ್ದರು ಎಂಬ ಮಾಹಿತಿ ಬಹಿರಂಗವಾಗಿತ್ತು. ರಚನಾ ಸರ್ಕಾರದ ಮರುಪರೀಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು. ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ರಚನಾ ನಾಪತ್ತೆಯಾಗಿದ್ದಳು.
ಪ್ರಕರಣದ ಇನ್ನೋರ್ವ ಆರೋಪಿ ಜಾಗೃತ್ ನನ್ನು ಚೆನ್ನಪಟ್ಟಣದಲ್ಲಿ ಸಿಐಡಿ ಬಂಧಿಸಿತ್ತು. ಜಾಗೃತ್ ಪಿಎಸ್ಐ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದ. ಪಿಎಸ್ಐ ಹಗರಣದಲ್ಲಿ ಎಫ್ ಐ ಆರ್ ಹಾಕಿರುವುದನ್ನು ರದ್ದು ಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಆರೋಪಿಗಳಲ್ಲಿ ಜಾಗೃತ್ ಕೂಡ ಒಬ್ಬ.